



ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.







ಕರಾಳ ಶನಿವಾರ ಎಂಬುದಾಗಿ ಟ್ವೀಟ್ ಮಾಡಿರುವ ಅವರು ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವನ್ನಪ್ಪಿದ್ದಾರೆ, ಇದರಿಂದಾಗಿ ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ. ಮೃತಪಟ್ಟವರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಾಚಾರಿಗಳು ಸಹ ಮೃತಪಟ್ಟಿದ್ದಾರೆ. ಬೈಕ್ ಸವಾರರು ಹಾಗೂ ಹಿಂಬದಿ ಸವಾರರು ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಸಂಚರಿಸಬೇಕು, ಕಾರು ಚಾಲಕರು ರಾತ್ರಿ ಸಮಯದಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.















