ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ- ಮೈಸೂರಿನಲ್ಲಿ 29 ಕೋಟಿ ಮೌಲ್ಯದ ಬಿಯರ್ ಸೀಝ್

ಮಂಗಳೂರು(ಮೈಸೂರು): ಯುವಜನತೆಯ ಅತೀ ಆಕರ್ಷಣೀಯ ಹಾಗೂ ಪ್ರತಿಷ್ಠಿತ ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ. ಪರಿಣಾಮ 29 ಕೋಟಿ ಮೌಲ್ಯದ 78678 ಬಾಕ್ಸ್ ಬಿಯರ್ ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಯುನೈಟೆಡ್ ಬ್ರಿವರಿಸ್ ಕಂಪನಿ ತಯಾರಿಸಿದ್ದ ಬಿಯರ್ ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ.‌

ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್ ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದ್ದು, 7e ಮತ್ತು 7c ನಮೂನೆಯ ದಿನಾಂಕ 15-07-23ರಂದು ಬಾಟಿಲಿಂಗ್ ಆದ ಬಿಯರ್ ನಲ್ಲಿ ಈ ಸೆಡಿಮೆಂಟ್ ಅಂಶ ಕಂಡುಬಂದಿದೆ. ಈ ಮಾಹಿತಿ ತಿಳಿದ ಕೂಡಲೇ ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್ ಗೆ ಕಳುಹಿಸಲಾಗಿತ್ತು. ಈ ಕುರಿತು 2-08-2023ರಂದು ಕೆಮಿಕಲ್ ವರದಿ ಬಂದಿದ್ದು, ವರದಿಯಲ್ಲಿ ಅನ್ ಫಿಟ್ ಫಾರ್ ಹ್ಯುಮನ್ ಕನ್ಸಂಪ್ಷನ್ ಎಂದು ತಿಳಿಸಲಾಗಿದೆ.

ಈ ಅವಧಿಯಲ್ಲಿ ಒಟ್ಟು‌ 78678 ಬಾಕ್ಸ್ ಬಿಯರ್ ಬಾಕ್ಸ್ ಸರಬರಾಜಗಿದ್ದು, ಡಿಪೋ ಮತ್ತು ಮಧ್ಯ ಮಾರಾಟ ಅಂಗಡಿಗಳಿಂದ ಎಲ್ಲಾ ಬಾಕ್ಸ್ ಗಳನ್ನು ತಡೆಹಿಡಿಯಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ನಂಜನಗೂಡಿನ ಬಿಯರ್ ತಯಾರಿಕಾ ಕಾರ್ಖಾನೆ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ಇನ್ ಹೌಸ್ ಕೆಮಿಸ್ಟ್ ಅವರು ಕೊಟ್ಟಿರುವ ವರದಿಯಲ್ಲಿ ಈ ಬಿಯರ್ ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಬಂದ ವರದಿ ಆದರಿಸಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಎ.ರವಿಶಂಕರ್ ತಿಳಿದಿದ್ದಾರೆ.

LEAVE A REPLY

Please enter your comment!
Please enter your name here