ಮಂಗಳೂರು(ಧಾರವಾಡ): ಗ್ಯಾಸ್ ತುಂಬಿದ ಟ್ಯಾಂಕರೊಂದು ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಹೈಕೋರ್ಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಕ್ಷಣ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ದೊಡ್ಡ ಮಟ್ಟದಲ್ಲಿ ಗ್ಯಾಸ್ ಲೀಕೇಜ್ ಆಗಿದ್ದು, ಜನ ಸಂಚಾರ ಹಾಗೂ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಯಾವುದೇ ಅನಾಹುತ ಆಗದಂತೆ ಕಟ್ಟೆಚ್ಚರ ವಹಿಸಿದ್ದರು. ಹೈಕೋರ್ಟ್ ಅಕ್ಕಪಕ್ಕದ ಬೇಲೂರು, ಕೋಟೂರು, ಮುಮ್ಮಿಗಟ್ಟಿ ಸೇರಿದಂತೆ ಇಡಿ ಕೈಗಾರಿಕಾ ಪ್ರದೇಶದ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ಬುಧವಾರ ಸಂಜೆಯಿಂದಲೇ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಲೀಕೇಜ್ ತಡೆಯಲು ಸಾಧ್ಯವಾಗದ ಹಿನ್ನೆಲೆ ಟ್ಯಾಂಕರ್‌ನಲ್ಲಿರುವ ಇಡೀ ಗ್ಯಾಸ್ ಅನ್ನು ಹೊರ ಹಾಕುವ ಪ್ರಯತ್ನ ಇಂದು ಬೆಳಿಗ್ಗೆ ಸಫಲಗೊಂಡಿದೆ. ಯಾವುದೇ ಅನಾಹುತ ಸಂಭವಿಸದೆ ಗ್ಯಾಸ್ ಖಾಲಿ ಮಾಡಲಾಗಿದ್ದು, ವಾಹನ ತೆರವುಗೊಳಿಸಿ ಬಳಿಕ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.