ಚಂದ್ರಯಾನ 3 ಯಶಸ್ವಿ – ಇಸ್ರೋ ಕೇಂದ್ರಕ್ಕೆ ಸಿಎಂ ಭೇಟಿ – ವಿಜ್ಞಾನಿಗಳಿಗೆ ಸನ್ಮಾನ

ಮಂಗಳೂರು(ಬೆಂಗಳೂರು): ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ತಂತ್ರಜ್ಞರು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.

ʼದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳುʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಮಾಡಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here