ಚಂದ್ರಯಾನ–3ರ ಯಶಸ್ವಿ ಉಡ್ಡಯನ – 17 ತಿಂಗಳಿನಿಂದ ಸಿಕ್ಕಿಲ್ಲ ವೇತನ – ಕಾಂಗ್ರೆಸ್‌ ಆರೋಪ

ಮಂಗಳೂರು(ಬೆಂಗಳೂರು): ಚಂದ್ರಯಾನ–3ರ ಉಡ್ಡಯನ ವಾಹನ ತಯಾರಿಸಿದ ಎಂಜಿನಿಯರ್‌ಗಳಿಗೆ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.

ರಾಂಚಿ ಮೂಲದ ಹಿಂದೂಸ್ತಾನ್ ಎಂಜಿನಿಯರಿಂಗ್ ಕಾರ್ಪೊರೇಷನ್ ಚಂದ್ರಯಾನ–3ರ ಉಡ್ಡಯನ ವಾಹನ ತಯಾರಿಸಿದ್ದು, ಇದರ ಎಂಜಿನಿಯರ್‌ಗಳಿಗೆ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಉಲ್ಲೇಖಿಸಿ ಸಾಮಾಜಿಕ ತಾಣ ‘ಎಕ್ಸ್‌’ನಲ್ಲಿ ಅವರು ಆರೋಪ ಮಾಡಿದ್ದಾರೆ. ಇದೇ ವೇಳೆ ಅವರು ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಮುಂದಾಳತ್ವದಲ್ಲಿ ನಿಜಕ್ಕೂ ಇತಿಹಾಸವನ್ನು ಸೃಷ್ಟಿಸಿದ್ದೇವೆ. ಸೋಮನಾಥ್ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ. ಆದರೆ ಕಪಟತನ ತೋರಿರುವ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ. ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡ್ ಆದ ತಕ್ಷಣ ಪರದೆಯಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ, ವಿಜ್ಞಾನಿಗಳ ಸಾಧನೆಯ ಶ್ರೇಯಸ್ಸು ಪಡೆಯಲು ಯತ್ನಿಸಿದ್ದಾರೆ. ಆದರೆ ಇಸ್ರೊ ಮತ್ತು ವಿಜ್ಞಾನಿಗಳಿಗೆ ನೆರವು ನೀಡುವಲ್ಲಿ ಸರ್ಕಾರವು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಚಂದ್ರಯಾನ-3ರ ಯೋಜನೆಯಲ್ಲಿ ಕೆಲಸ ಮಾಡಿದ್ದ ಹಿಂದೂಸ್ತಾನ್ ಎಂಜಿನಿಯರ್ ಕಾರ್ಪೋರೇಷನ್  ಎಂಜಿನಿಯರ್‌ಗಳಿಗೆ ಕಳೆದ 17 ತಿಂಗಳು ಸಂಬಳ ಯಾಕೆ ಪಾವತಿ ಮಾಡಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಎಕ್ಸ್‌ ನ್ಯೂಸ್

LEAVE A REPLY

Please enter your comment!
Please enter your name here