ಮಂಗಳೂರು: ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆ.1 ಕ್ಕೆ ಮುಂದೂಡಿದೆ.
ಕಾವೇರಿ ನದಿ ನೀರು ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶರು ಮಧ್ಯಂತರ ಅವಧಿಯಲ್ಲಿ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.