ಆಟಿಕೆ ಪಿಸ್ತೂಲು ತೋರಿಸಿ ಕಿಡ್ನ್ಯಾಪ್ ಮಾಡಿ ನಗದು ವಸೂಲಿಗೆ ಯತ್ನಿಸಿದ ಆರೋಪಿ ಬಂಧನ

ಮಂಗಳೂರು : ನಗರದಲ್ಲಿ ವ್ಯಕ್ತಿಯೋರ್ವರನ್ನು ಕಿಡ್ನಾಪ್ ಮಾಡಿ ದರೋಡೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಠಾಣಾ ಪೋಲೀಸರು ಓರ್ವನನ್ನು ವಶಕ್ಕೆ ಪಡೆದು ಆತನಿಂದ ಕಾರು ಹಾಗೂ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಗರದ ಅಥವಾ ಅಪಾರ್ಟ್ಮೆಂಟ್ ನಲ್ಲಿದ್ದ ವ್ಯಕ್ತಿಯೋರ್ವನನ್ನು ಪರಿಚಯಸ್ಥನೇ ಪಿಸ್ತೂಲು ತೋರಿಸಿ ದರೋಡೆಗೆ ಯತ್ನಿಸಿದ್ದ. ಹಣ ಹಾಗೂ ವಾಹನ ನೀಡಲು ನಿರಾಕರಿಸಿದ ಸಂದರ್ಭದಲ್ಲಿ ಆತನನ್ನು ಕುಟುಂಬ ಸಹಿತ ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡ ವ್ಯಕ್ತಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಆಧಾರದಲ್ಲಿ ನಗರದ ಪೊಲೀಸ್ ಆಯುಕ್ತರ ಮಾರ್ಗದರ್ಶನದ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿ ಯುವಕನನ್ನು ಪಾಂಡೇಶ್ವರ ಠಾಣಾ ಪೋಲೀಸರು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here