ಮಂಗಳೂರು(ಬೆಂಗಳೂರು):ಇಂದಿನಿಂದ ಸೆಪ್ಟೆಂಬರ್ 5ರವರೆಗೆ ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.