ಸೌಜನ್ಯ ಕೊಲೆ ಪ್ರಕರಣ- ಮರುತನಿಖೆ ಮಾಡಬೇಕು ಎನ್ನುವವರು ಕೋರ್ಟ್‌ಗೆ ಹೋಗಿ ನಿರ್ದೇಶನ ತರಲಿ-ಗೃಹ ಸಚಿವ ಡಾ. ಜಿ. ಪರಮೇಶ್ವರ್‌

ಮಂಗಳೂರು(ಅರಸೀಕೆರೆ): ಸೌಜನ್ಯ ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರುತನಿಖೆ ಮಾಡುವಂತಿಲ್ಲ. ಆದರೆ ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ಮರುತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಆ.27ರಂದು ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೌಜನ್ಯ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಅಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್‌ ಮರುತನಿಖೆ ಮಾಡಿ ಎಂದು ನಿರ್ದೇಶಿಸಿದರೆ ಸರಕಾರ ಮರುತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯ ಕೊಲೆ ಪ್ರಕರಣ ದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರುತನಿಖೆ ಮಾಡಬೇಕು ಎನ್ನುವವರು ಕೋರ್ಟ್‌ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್‌ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.

LEAVE A REPLY

Please enter your comment!
Please enter your name here