ಡೇಟಿಂಗ್‌ ಆ್ಯಪ್ ಬಳಸುತ್ತಿದ್ದೀರಾ…. ಎಚ್ಚರ – ಆ್ಯಪ್ ಬಳಸಿ ವಂಚಿಸಿ ಸುಲಿಗೆ – ಇಬ್ಬರ ಬಂಧನ

ಮಂಗಳೂರು(ಬೆಂಗಳೂರು): ಆನ್ ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡ್ತಿದ್ದ ಇಬ್ಬರು ಆರೋಪಿಗಳನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ನದೀಂ ಪಾಷ ಹಾಗೂ ನಾಗೇಶ್ ಎಂದು ಗುರುತಿಸಲಾಗಿದ್ದು, ಲೊಕ್ಯಾಂಟೋ ಆ್ಯಪ್ ಮೂಲಕ ಹುಡುಗಿ ಹೆಸರಿಲ್ಲಿ ಕಾಲ್ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚಿ ವಂಚಿಸುತ್ತಿದ್ದರು ಎನ್ನಲಾಗಿದೆ. ಆರೋಪಿಗಳು ಲೊಕ್ಯಾಂಟೋ ಆ್ಯಪ್ ಬಳಸುವರನ್ನೇ ಟಾರ್ಗೆಟ್ ಮಾಡಿ, ಮೊದಲು ಸುಂದರ ಅಪರಿಚಿತ ಯುವತಿಯರ ಫೋಟೋ ಹಾಕಿ ಹುಡುಗಿ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡ್ತಿದ್ದರು. ಬಳಿಕ ಅಕೌಂಟ್ ನಿಂದ‌ ಮೊದಲಿಗೆ ಮೆಸೇಜ್ ಮಾಡಿ ಸಲುಗೆಯಿಂದ ಮಾತಾಡುತ್ತಿದ್ದರು. ಹುಡುಗ ಮಾತಿಗೆ ಮರುಳಾದ ಅಂತ ಗೊತ್ತಾಗುತ್ತಿದ್ದಂತೆಯೇ ಒಂದು ಲೊಕೇಷನ್ ಕೊಟ್ಟು ಕರೆಸಿಕೊಳ್ಳುತ್ತಿದ್ದರು.

ಯುವಕ ಯುವತಿ ಕಳಿಸಿದ ಲೊಕೇಷನ್​ಗೆ ಬರುತ್ತಿದ್ದಂತೆ ಲೋಕ್ಯಾಂಟೋ ಆ್ಯಪ್ ಸಂಪರ್ಕಿತ ವ್ಯಕ್ತಿ ಇವನೇನ ಎಂದು ತಿಳಿದುಕೊಂಡು ಬಳಿಕ ಚಾಕು ತೋರಿಸಿ ಆಟೋದಲ್ಲಿ ಕಿಡ್ನಾಪ್ ಮಾಡಿ ಸುಲಿಗೆ ಮಾಡುತ್ತಿದ್ದರು. ಹಣ, ಚಿನ್ನಾಭರಣ ಸುಲಿಗೆ ಮಾಡಿ, ಅಕೌಂಟ್​ನಿಂದಲೂ ಹಣ ಡ್ರಾ ಮಾಡಿಸಿಕೊಳ್ಳುತ್ತಿದ್ದರು. ಮಾತ್ರವಲ್ಲದೆ ಸ್ನೇಹಿತರಿಗೆ ಕರೆ ಮಾಡಿ ಗೂಗಲ್ ಪೇ, ಫೋನ್ ಪೇ ಕೂಡ ಮಾಡಿಸಿಕೊಂಡು, ರಾತ್ರಿಯಿಡೀ ಬಂಧನದಲ್ಲಿ ಇರಿಸಿ ಬೆಲೆಬಾಳುವ ವಸ್ತುಗಳ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ರೀತಿ ಸುಮಾರು 15ಕ್ಕೂ ಅಧಿಕ ಜನರಿಗೆ ಹುಡುಗಿ ಹೆಸರಲ್ಲಿ ಮೆಸೇಜ್ ಮಾಡಿ ಕರೆಸಿ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಇದೇ ರೀತಿಯ ಕೃತ್ಯ ಎಸಗಿದ್ದು ವ್ಯಕ್ತಿಯೊಬ್ಬರಿಂದ 60 ಸಾವಿರ ಹಣ ಸುಲಿಗೆ ಮಾಡಿದ್ದರು. ವಂಚನೆಗೊಳಗಾದ ವ್ಯಕ್ತಿ ನೀಡಿದ ದೂರಿನ ಹಿನ್ನಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here