ಇಂದಿನಿಂದ ಸೆ.10 ರವರೆಗೆ ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ

ಮಂಗಳೂರು: ರಾಜ್ಯದಲ್ಲಿ ಸರ್ಕಾರ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಇಂದಿನಿಂದ ಅವಕಾಶ ಕಲ್ಪಿಸಿದೆ. ಆದರೆ, ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಯಾವಾಗ ಅನುಮತಿ ನೀಡುತ್ತದೆ ಎಂಬ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲ.

ಈಗಾಗಲೇ ಬಿಪಿಎಲ್ ಕಾರ್ಡ್​​ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸರ್ಕಾರ ಇನ್ನೂ ವಿಲೇವಾರಿ ಮಾಡಿಲ್ಲ. ಇದರ ಮಧ್ಯೆ ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳ ಫಲಾನುಭವಿಗಳಾಗಲು ಬಿಪಿಎಲ್​ ಕಾರ್ಡ್​ಗಾಗಿ ಜನರು ಮುಗಿ ಬೀಳುತ್ತಿದ್ದಾರೆ. ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ ಹಲವರು ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ ಅವಕಾಶ ಕಲ್ಪಿಸಿದ್ದು, ಸೆ.10ರವರೆಗೆ ಈ ಸೇವೆ ಲಭ್ಯವಿರಲಿದೆ. ರೇಷನ್ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ.

LEAVE A REPLY

Please enter your comment!
Please enter your name here