ಮಂಗಳೂರು(ಮುಂಬೈ): ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ರಚನೆಯಾಗಿರುವ ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ‘ 13 ಸದಸ್ಯರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ಶುಕ್ರವಾರ ರಚಿಸಿದೆ. ಈ ಸಮಿತಿಗೆ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವಿದೆ. ಸೆಪ್ಟೆಂಬರ್ 30ರೊಳಗೆ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗುವುದು ಎಂದು ಇಂಡಿಯಾದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, ಎನ್ ಸಿ ಪಿ ಮುಖಂಡ ಶರದ್ ಪವಾರ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ಶಿವಸೇನೆಯ ಸಂಜಯ್ ರಾವುತ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೇನ್, ಎಎಪಿಯ ರಾಘವ್ ಚಡ್ಡಾ, ಜೆಡಿಯು ಮುಖಂಡ ಲಲನ್ ಸಿಂಗ್, ಸಿಪಿಐ ನಾಯಕ ಡಿ.ರಾಜಾ, ಎನ್ ಸಿ ಯ ಒಮರ್ ಅಬ್ದುಲ್ಲ ಸೇರಿದಂತೆ ಪಿಡಿಪಿಯ ಮೆಹಬೂಬ ಮುಫ್ತಿ ಅವರು ಸಮನ್ವಯ ಸಮಿತಿಯ ಸದಸ್ಯರಾಗಿದ್ದಾರೆ.