2023-24 ನೇ ಸಾಲಿನ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕರ ಪ್ರಶಸ್ತಿ’ ಪ್ರಕಟ

ಮಂಗಳೂರು(ಬೆಂಗಳೂರು): 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಸೆ.2ರಂದು ಪ್ರಕಟಗೊಂಡಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದು ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು 2023-24 ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಸೆ.5 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಸಹ ಶಿಕ್ಷಕರು, ವಿಶೇಷ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ. 25,000/- ರಂತೆ, ಒಟ್ಟು ರೂ. 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಿಯಂದ ಭರಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

 

LEAVE A REPLY

Please enter your comment!
Please enter your name here