ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ

ಮಂಗಳೂರು(ಬೆಂಗಳೂರು): ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ
ಮೈಕ್ರೋ ಬ್ಲಾಗಿಂಗ್ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ನೀಡಿದೆ.

ಈ ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿರುವ ಟೆಲಿಮೆಟ್ರಿ, ಟ್ರ್ಯಾಂಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಕೇಂದ್ರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಬಾಹ್ಯಾಕಾಶ ನೌಕೆ ಸುಸ್ಥಿತಿಯಲ್ಲಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ. ಬಾಹ್ಯಾಕಾಶ ನೌಕೆ ಈಗ 245 ಕಿ.ಮೀ x 22459 ಕಿ.ಮೀ. ಕಕ್ಷೆ ತಲುಪಿದೆ. ಮುಂದಿನ ಹಂತದ ಕಕ್ಷೆ ಬದಲಾವಣೆ ಸೆಪ್ಟೆಂಬರ್ 05, ಮಂಗಳವಾರ 3 ಗಂಟೆಗೆ ನಿಗದಿಯಾಗಿದೆ. ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್‌1 ವೀಕ್ಷಣಾಲಯವನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಸೆ.2ರಂದು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು. ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ ಎಲ್‌–1 ಅಂತರಿಕ್ಷ ವೀಕ್ಷಣಾಲಯವನ್ನುಇರಿಸಲಾಗುವುದು. 125 ದಿನಗಳಲ್ಲಿ ಎಲ್‌–1 ಬಿಂದುವಿಗೆ ಸೇರಿಸಲಾಗುತ್ತದೆ.

LEAVE A REPLY

Please enter your comment!
Please enter your name here