ವೋಟ್ ಬ್ಯಾಂಕ್ ರಾಜಕಾರಣ – ಸನಾತನ ಧರ್ಮಕ್ಕೆ ಅವಮಾನ – ಅಮಿತ್ ಶಾ

ಮಂಗಳೂರು (ರಾಜಸ್ಥಾನ): ವೋಟ್ ಬ್ಯಾಂಕ್ ಮತ್ತು ಓಲೈಕೆ ರಾಜಕಾರಣಕ್ಕಾಗಿ ವಿರೋಧ ಪಕ್ಷಗಳ ನಾಯಕರು ‘ಸನಾತನ ಧರ್ಮ’ಕ್ಕೆ ಅವಮಾನ ಎಸಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ(ಸೆ.03) ಆರೋಪಿಸಿದ್ದಾರೆ. ಚುನಾವಣೆ ಹೊಸ್ತಿಲಲ್ಲಿರುವ ರಾಜಸ್ಥಾನದ ಡುಂಗರಪುರದಲ್ಲಿ ಪರಿವರ್ತನಾ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ವಿರೋಧಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಸೇರಿದಂತೆ ಡಿಎಂಕೆ ನಾಯಕರು ಹೇಳುತ್ತಾರೆ. ಅವರು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದು, ಸನಾತನ ಧರ್ಮವನ್ನು ಅವಮಾನಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸನಾತನ ಧರ್ಮ ಉಳಿಯಲಿದೆ. ಸನಾತನವು ಜನರ ಹೃದಯದಲ್ಲಿದೆ. ಸಂವಿಧಾನದ ಆಧಾರದಲ್ಲಿ ದೇಶ ಮುನ್ನಡೆಯಲಿದೆ ಎಂದು ಮೋದಿ ಹೇಳಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಮೋದಿ ಯತ್ನಿಸಿದ್ದಾರೆ ಎಂದು ಅವರು ಉಲ್ಲೇಖ ಮಾಡಿದ್ದಾರೆ. ‘ಸನಾತನ ಧರ್ಮ’ದ ವಿರುದ್ಧ ವಾಗ್ದಾಳಿ ನಡೆಸಿದ್ದ ತಮಿಳುನಾಡಿನ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here