ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು(ಬೆಂಗಳೂರು): ಶಿಕ್ಷಕರ ದಿನದ ಅಂಗವಾಗಿ ಸೆ.5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಶಿಕ್ಷಕರಿಗೂ ಶುಭಾಶಯ ಕೋರಿದ್ದಾರೆ.


ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ, ನಮ್ಮ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಹಾಗೂ ಅವರ ಕನಸುಗಳನ್ನು ಪ್ರೇರೆಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ಶಿಕ್ಷಕರ ಅಚಲವಾದ ಮನೋಭಾವ ಹಾಗೂ ಅವರು ವಿದ್ಯಾರ್ಥಿಗಳ ಮೇಲೆ ಬೀರುವ ಪ್ರಭಾವ ಆಗಾಧವಾದದ್ದು ಎಂದು ಹೇಳಿರುವ ಪ್ರಧಾನಿ, ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮದಿನ ಪ್ರಯುಕ್ತ ಶುಭಾಶಯ ಕೋರಿದ್ದಾರೆ. ಶಿಕ್ಷಕರ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here