



ಮಂಗಳೂರು (ಕೊಲಂಬೊ): ಭಾರತದ ಆತಿಥ್ಯದಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಭಾರತದ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದಾರೆ.







ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮ್ಯಾನ್ ಕೆ ಎಲ್ ರಾಹುಲ್ ಮತ್ತು ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈಗ ನಡೆಯುತ್ತಿರುವ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಹೊಸ ಮುಖ ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ ಹಾಗೂ ವೇಗದ ಬೌಲರ್ ಕೃಷ್ಣ ಅವರನ್ನು ಕೈಬಿಡಲಾಗಿದೆ. ಆದರೆ ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.



ಭಾರತದ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯಾ(ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮಹಮ್ಮದ್ ಶಮಿ, ಮಹಮ್ಮದ್ ಸಿರಾಜ್ ಮತ್ತು ಕುಲ್ ದೀಪ್ ಯಾದವ್.












