ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದ್ದು, ಅಧಿಕ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಸಾರ್ವಜನಿಕರು ಮತ್ತು ಭಕ್ತಾದಿಗಳು ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.