ಹೊಸದಿಲ್ಲಿ: ಸೆ.19 ರಿಂದ ಹೊಸ ಕಟ್ಟಡದಲ್ಲಿ ನಡೆಯಲಿದೆ ಸಂಸತ್ತಿನ ವಿಶೇಷ ಅಧಿವೇಶನ

ಹೊಸದಿಲ್ಲಿ: ಸಂಸತ್ತಿನ ವಿಶೇಷ ಅಧಿವೇಶನವು ಸೆ.18 ರಿಂದ 22 ರವರೆಗೆ ನಡೆಯಲಿದೆ. ಸೆ.19 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಸಂಸತ್ತಿನ ಕಾರ್ಯಚಟುವಟಿಕೆಗಳು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

ಈ ವರ್ಷದ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್ ಭವನ ಉದ್ಘಾಟನೆಗೊಳಿಸಿದ್ದರು. ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಯಾವುದೇ ಅಜೆಂಡಾ ಪಟ್ಟಿ ಮಾಡಿಲ್ಲ ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರದಲ್ಲಿ ಬೆಟ್ಟು ಮಾಡಿದ್ದಾರೆ.ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ. ಎಲ್ಲಾ ಐದು ದಿನಗಳನ್ನು ಸರಕಾರಿ ವ್ಯವಹಾರಕ್ಕೆ ಮೀಸಲಿಡಲಾಗಿದೆ ಎಂದು ನಮಗೆ ತಿಳಿಸಲಾಗಿದೆ ” ಎಂದು ಸೋನಿಯಾ ಗಾಂಧಿ ಇಂದು ತನ್ನ ಪತ್ರದಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here