ಮಂಗಳೂರು(ಬೆಂಗಳೂರು): ಬಹು ನಿರೀಕ್ಷಿತ ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗ ಯೋಜನೆಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗ ರದ್ದುಪಡಿಸಲು 3 ಅಂಶಗಳನ್ನು ಆಧರಿಸಿ ಪಿಐಎಲ್ ಸಲ್ಲಿಸಲಾಗಿತ್ತು. ಆದರೆ, ಕರ್ನಾಟಕ ಹೈಕೋರ್ಟ್ ಪಿಐಎಲ್‌ನಲ್ಲಿನ ಅಂಶಗಳನ್ನು ವಜಾಗೊಳಿಸಿದೆ. ಕೆಲವು ಸಂಸ್ಥೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಹೊಸ ರೈಲು ಮಾರ್ಗವು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿರೀಕ್ಷೆಯಿದೆ ಎಂದು ವಿಶ್ಲೇಷಿಸಲಾಗಿದೆ. ಹೈಕೋರ್ಟ್ ಹುಬ್ಬಳ್ಳಿ-ಅಂಕೋಲಾ ರೈಲಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಲೇವಾರಿ ಮಾಡಿ ಕಾಮಗಾರಿ ಅನುಷ್ಠಾನಕ್ಕೆ ಅನುಮತಿ ನೀಡಿದೆ.