ಜೈಲರ್ ಸಿನೆಮಾದ ನಟ ಮಾರಿಮುತ್ತು ಹೃದಯಾಘಾತದಿಂದ ನಿಧನ

ಮಂಗಳೂರು: ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು ಇಂದು (ಸೆ.8) ಹೃದಯಾಘಾತದಿಂದ ನಿಧನರಾಗಿದ್ದಾರೆ. ’ಜೈಲರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಿರ್ದೇಶಕ ಹಾಗೂ ನಟ ಮಾರಿಮುತ್ತು ಟಿವಿ ಕಾರ್ಯಕ್ರಮವೊಂದಕ್ಕೆ ಡಬ್ಬಿಂಗ್ ಮಾಡುವ ವೇಳೆ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಟ ಹಾಗೂ ನಿರ್ದೇಶಕ ಮಾರಿಮುತ್ತು ಅವರ ಹಠಾತ್ ನಿಧನಕ್ಕೆ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಇತ್ತೀಚೆಗೆ ಬಿಡುಗಡೆಗೊಂಡ ರಜನಿಕಾಂತ್ ನಟನೆಯ ಜೈಲರ್ ಚಿತ್ರದಲ್ಲಿ ಮಾರಿಮುತ್ತು ಖಳನಾಯಕ ವಿನಾಯಕ್ ಬಲಗೈ ಬಂಟನಾಗಿ ನಟಿಸಿದ್ದಾರೆ. ಕಿರುತೆರೆಯ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುತ್ತಿದ್ದ ಮಾರಿಮುತ್ತು ಅವರ ಸಾವು ತಮಿಳು ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ.

LEAVE A REPLY

Please enter your comment!
Please enter your name here