ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದು ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಚುನಾವಣೆ ನಡೆಯಿತು.
ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ನೂತನ ಮೇಯರ್ ಆಗಿ ಬಿಜೆಪಿಯ ಸುಧೀರ್ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುನೀತಾ ಅವರು ಆಯ್ಕೆಯಾಗಿರುವುದಾಗಿ ಘೋಷಿಸಿದರು. ಅಲ್ಲದೆ 4 ಸ್ಥಾಯಿ ಸಮಿತಿಗಳಿಗೆ ತಲಾ 7 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಪ್ರಾದೇಶಿಕ ಆಯುಕ್ತರು ತಿಳಿಸಿದರು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು.