ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೂಕಂಪ – 296 ಜನ ಸಾವು

ಮಂಗಳೂರು(ರಬಾತ್‌): ಮೊರಾಕ್ಕೊದಲ್ಲಿ ಸೆ.8ರ ರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು 296 ಜನರು ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಮರ್ರಾಕೆಚ್‌ನ ನೈಋತ್ಯಕ್ಕೆ 71 ಕಿ.ಮೀಟರ್‌ ದೂರದಲ್ಲಿ ಭೂಮಿಯಿಂದ 18 ಕಿ.ಮೀ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಇಲಾಖೆ ತಿಳಿಸಿದೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಮನೆಗಳು, ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಗಳು ಭರದಿಂದ ನಡೆಯುತ್ತಿವೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿಗೆ ಎಂದು ಮೊರಾಕ್ಕೊ ಪೊಲೀಸರು ಹೇಳಿದ್ದಾರೆ. ಮರ್ರಾಕೆಚ್‌ನ ನೈಋತ್ಯ ಭಾಗ ಭೂಕಂಪನಕ್ಕೆ ಗುರಿಯಾಗುವ ಪ್ರದೇಶವಾಗಿದೆ. 2004ರಲ್ಲಿ ಈಶಾನ್ಯ ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ 628 ಮಂದಿ ಮೃತಪಟ್ಟಿದ್ದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here