ಮಂಗಳೂರು(ಬೆಂಗಳೂರು): ಗೃಹ ಲಕ್ಷ್ಮಿ, ಗೃಹ ಜ್ಯೋತಿ ಗ್ಯಾರಂಟಿ ಮುಂತಾದ ಉಚಿತ ಯೋಜನೆಗಳ ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ ಕೊಟ್ಟ ಆಶ್ವಾಸನೆ ಈಡೇರಿಸಿದೆ. ಈ ಮಧ್ಯೆಯೇ ಜನರಿಗೆ ಆರೋಗ್ಯ ಭಾಗ್ಯ ನೀಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಕ್ಯಾಬಿನೆಟ್ ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕರೆ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ. ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲಿದೆ. ಹಣ ಪಡೆಯದೆ ಈ ಭಾಗ್ಯ ನೀಡಲು ಮುಂದಾಗಿದೆ. ಇದಕ್ಕಾಗಿ ಮೊಬೈಲ್ ಯೂನಿಟ್ ಪ್ರತ್ಯೇಕ ಸಿಬ್ಬಂದಿ ನೇಮಕಾತಿ ವೈದ್ಯರ ನೇಮಕಾತಿಗೆ ಇಲಾಖೆ ಮುಂದಾಗಿದೆ. ಈ ಗೃಹ ಆರೋಗ್ಯ ಯೋಜನೆ ಸೇವೆಯನ್ನು ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ.\