ಮಂಗಳೂರು(ಬೆಂಗಳೂರು): ಪದವಿ ಪೂರ್ವ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ‘ನನ್ನ ಮೈತ್ರಿ’ ಯೋಜನೆ ರಾಜ್ಯದ ಎರಡು ಜಿಲ್ಲೆಗಳಲ್ಲಿ ಸೆ.12ರಿಂದ ಜಾರಿಯಾಗದ್ದು, ಯೋಜನೆಗೆ ಮಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ.
ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಿಗೆ ವಿಸ್ತರಿಸುವ ಮುನ್ನ ಮೊದಲ ಹಂತದಲ್ಲಿ ಚಾಮರಾಜನಗರ ಜಿಲ್ಲೆಯ 300 ತರುಣಿಯರಿಗೆ ವಿತರಿಸಿ ಅಧ್ಯಯನ ಮಾಡಲಾಗಿದೆ. ಈ ಪೈಕಿ 272 ಹೆಣ್ಣುಮಕ್ಕಳು ಕಪ್‌ಗಳನ್ನು ಸ್ವೀಕರಿಸಿ ಯಶಸ್ವಿಯಾಗಿ ಬಳಕೆ ಮಾಡುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹತ್ತಾರು ವರ್ಷ ಬಾಳಿಕೆ ಬರುವ ಮೆನ್‌ಸ್ಟ್ರುಯಲ್ ಕಪ್‌ಗಳನ್ನು ನನ್ನ ಮೈತ್ರಿ ಹೆಸರಿನಡಿ ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳ 15 ಸಾವಿರ ಪದವಿ ಪೂರ್ವ ವಿದ್ಯಾರ್ಥಿನಿಯರಿಗೆ ವಿತರಿಸಲು ಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಖ್ಯಾತ ಚಲನಚಿತ್ರ ನಟಿ ಹಾಗೂ ಯೋಜನೆಯ ರಾಯಭಾರಿ ಸಪ್ತಮಿ ಗೌಡ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ. ಎಂ. ಇಂದುಮತಿ, ವಿಧಾನ ಪರಿಷತ್ ಸದಸ್ಯ ಕೆ. ಮಂಜುನಾಥ ಭಂಡಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗಿಯ ಸಹ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾ. ವೀಣಾ ವಿ., ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಭಾಗವಹಿಸಿದ್ದರು.