ಮಂಗಳೂರು(ಲಕ್ನೋ): ಭಾರಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಹಲವಾರು ಭಾಗಗಳಲ್ಲಿ ಮನೆ ಮತ್ತಿತರ ಕಟ್ಟಡಗಳು ಸಂಪೂರ್ಣ ಜಲಾವೃತವಾಗಿದೆ. ಮೇಲ್ಛಾವಣಿ ಕುಸಿತ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಗಳು ವರದಿಯಾಗಿವೆ.
ಲಖನೌ ಮತ್ತು ಬಾರಾಬಂಕಿ ಸೇರಿದಂತೆ ಹಲವು ಭಾಗಗಳು ಜಲಾವೃತಗೊಂಡಿದ್ದು, ಪ್ರಯಾಣಿಕರಿಗೆ ತೊಂದರೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 14 ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಒಡಿಶಾ, ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಐಎಂಡಿ ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಮತ್ತು ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಗಂಗಾ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಕರಾವಳಿ ತೀರದ ಸ್ಥಳಗಳಲ್ಲಿ ಮಿಂಚು ಸಹ ಇರುತ್ತದೆ. ಆಂಧ್ರಪ್ರದೇಶ ಮತ್ತು ಯಾನಂ, ಉತ್ತರ ಆಂತರಿಕ ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲೂ ಮಳೆಯಾಗಲಿದೆ.