ಮಂಗಳೂರು(ರಾಮನಗರ): ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ.
ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಳಿಕ ವಾಹನಗಳನ್ನು ಬೇರೆ ಮಾರ್ಗದ ಮೂಲಕ ಕಳುಹಿಸಲಾಯಿತು. ಕೈಯಲ್ಲಿ ಖಾಲಿ ಬಿಂದಿಗೆ ಹಿಡಿದುಕೊಂಡು ಉರುಳು ಸೇವೆ ಮಾಡುವ ಮೂಲಕ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.