ಮಂಗಳೂರು(ನವದೆಹಲಿ): ಪ್ರಧಾನ ಮಂತ್ರಿ ಉಜ್ವಲ ಯೋಜನೆ ವಿಸ್ತರಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯ ಕ್ಯಾಬಿನೆಟ್ ಸಚಿವ ಸಭೆ ಅನುಮೋದನೆ ನೀಡಿದೆ. ಇದರಿಂದ ಬರೋಬ್ಬರಿ 75 ಲಕ್ಷ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ಸಿಗಲಿದೆ.
ಉಜ್ವಲ ಯೋಜನೆಯನ್ನು ಮತ್ತೆ ಮೂರು ವರ್ಷಗಳ ಕಾಲ ವಿಸ್ತರಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯ ಕ್ಯಾಬಿನೆಟ್ ಅನುಮೋದನೆ ನೀಡಿದೆ. 1,650 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ವಿಸ್ತರಿಸಲು ನಿರ್ಧರಿಸಲಾಗಿದೆ. ಇದರಿಂದ ಬರೋಬ್ಬರ 75 ಲಕ್ಷ ಅರ್ಹ ಕುಟುಂಬಕ್ಕೆ ಉಜ್ವಲ ಯೋಜನೆಯಡಿ ಉಚಿತ ಎಲ್‌ಪಿಜಿ ಗ್ಯಾಸ್ ಸಂಪರ್ಕ ಸಿಗಲಿದೆ. ಈ ಯೋಜನೆ 2023-24ರಿಂದ 2025-26ರವರೆಗೆ ವಿಸ್ತರಣೆಯಾಗಿದೆ. ಉಜ್ವಲ ಯೋಜನೆಯಡಿ 14.2 ಕೆಜಿ ಸಿಂಗಲ್ ಸಿಲಿಂಡರ್ ಗ್ಯಾಸ್ ಸಂಪರ್ಕ 2200 ರೂಪಾಯಿ, 5ಕೆಜಿ ಡಬಲ್ ಸಿಲಿಂಡರ್ ಸಂಪರ್ಕ 2200 ರೂಪಾಯಿ, 5 ಕೆಜಿ ಸಿಂಗಲ್ ಸಿಲಿಂಡರ್ ಸಂಪರ್ಕ 1300 ರೂಪಾಯಿಗೆ ಸಿಗಲಿದೆ. ಉಜ್ವಲ ಯೋಜನೆಯಡಿ ಪ್ರತಿ 14.2 ಕೆಜಿ ಗ್ಯಾಸ್ ಸಿಲಿಂಡರ್ ಮೇಲೆ ಒಟ್ಟು 400 ರೂಪಾಯಿ ಸಬ್ಸಿಡಿ ಸಿಗಲಿದೆ. ಇನ್ನು ಪ್ರತಿ ವರ್ಷ ಸಬ್ಸಿಡಿ ಅಡಿಯಲ್ಲಿ 12 ಸಿಲಿಂಡರ್ ಪಡೆದುಕೊಳ್ಳಬಹುದು.