ಲ್ಯಾಂಡಿಗ್ ವೇಳೆ ರನ್‌ವೇಯಿಂದ ಜಾರಿದ ಖಾಸಗಿ ವಿಮಾನ – ಮೂವರಿಗೆ ಗಾಯ

ಮಂಗಳೂರು(ಮುಂಬೈ): ಸೆ.14ರ ಸಂಜೆ ಸುರಿದ ಭಾರೀ ಮಳೆಯ ನಡುವೆ ಮುಂಬೈ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನವೊಂದು ರನ್‌ವೇಯಿಂದ ಜಾರಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು ಎಂಟು ಮಂದಿ ಇದ್ದರು ಎನ್ನಲಾಗಿದ್ದು ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ರನ್‌ವೇಯನ್ನು ಕೆಲವು ನಿಮಿಷಗಳ ಕಾಲ ಮುಚ್ಚಲಾಗಿದ್ದು,ಈ ವೇಳೆ ಇಲ್ಲಿ ಲ್ಯಾಂಡ್‌ ಆಗಬೇಕಿದ್ದ ವಿಸ್ತಾರಾ ಏರ್‌ಲೈನ್ಸ್ ವಿಮಾನವನ್ನು ಗೋವಾದ ಮೋಪಾ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here