ಮಂಗಳೂರು: ಮೂಲತಃ ಉತ್ತರ ಕರ್ನಾಟಕದ ಸವದತ್ತಿಯವರಾಗಿದ್ದು, ಮಂಗಳೂರು ನಗರ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಮಹೇಶ್ (31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.
ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದು, ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.