ಮಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಗೆ ಡೀಲ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋವಿಂದ ಬಾಬು ಪೂಜಾರಿ ಆಪ್ತ ಪ್ರಸಾದ್ ಬೈಂದೂರು ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಉದ್ಯಮಿ ಗೋವಿಂದ ಬಾಬು ಪೂಜಾರಿ ಆಪ್ತನಾಗಿರುವ ಪ್ರಸಾದ್ ಬೈಂದೂರು ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಪ್ರಸಾದ್ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಪ್ರಸಾದ್ ನನ್ನು ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಪ್ರಸಾದ್ ಪ್ರಕರಣದ 8ನೇ ಆರೋಪಿಯಾಗಿದ್ದು, ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರಳನ್ನು ಪರಿಚಯಿಸಿದ್ದ. ಬಳಿಕ ಗೋವಿಂದ ಬಾಬು ಪೂಜಾರಿ ಜೊತೆ ಒಡನಾಟ ಬೆಳೆಸಿಕೊಂಡಿದ್ದ ಚೈತ್ರಾ ಕುಂದಾಪುರ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದಳು.