ಮಂಗಳೂರು(ಚಿಕ್ಕಮಗಳೂರು): ಕೇರಳದಲ್ಲಿ ನಿಫಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಕೇರಳದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮಾತ್ರವಲ್ಲದೇ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ಅನ್ನು ಕೂಡ ತೆರೆಯಲಾಗಿದೆ. ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟದ ಸಾಲುಗಳು ವಿವಿಧ ರಾಜ್ಯಗಳಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದು, ಪ್ಯಾಕೇಜ್ ಏಜೆನ್ಸಿಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಿಲ್ಲೆಗೆ ಭೇಟಿ ನೀಡುತ್ತಿರುವುದರ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.