ಕಳ್ಳತನ ಮಾಡುತ್ತಿದ್ದ ಇಬ್ಬರು ಚೋರ ಶಿಖಾಮಣಿಗಳ ಬಂಧಿಸಿದ ಬಂಟ್ವಾಳ ಪೊಲೀಸರು

ಮಂಗಳೂರು(ಬಂಟ್ವಾಳ): ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.1ರಂದು ನಡೆದ ಚಿನ್ನಾಭರಣ, ನಗದು, ಬೆಳ್ಳಿಯ ಸಾಮಾಗ್ರಿಗಳ ಕಳವು ಪ್ರಕರಣಕ್ಕೆ ಸಂಬಂದಿಸಿದಂತೆ ಕೇಸು ದಾಖಲಿಸಿ ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣದ ಆರೋಪಿಗಳಾದ ಮಂಗಳೂರು ತಾಲೂಕು ಕಸಬಾ ಬೆಂಗ್ರೆಯ ಪರಾಜ್ (27) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು, ಕೃಷ್ಣಾಪುರದ ತೌಸಿಫ್ ಅಹಮ್ಮದ್‌ (34) ಎಂಬವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಒಟ್ಟು ರೂ 12,23,000/- ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ. 3,000/- ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯ ಕ್ಕೆ ಬಳಸಿದ ಸುಮಾರು 3,30,000/- ಮೌಲ್ಯದ ಮಹೀಂದ್ರ ಕ್ಸೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000/-ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಚಿನ್ನಾಭರಣಗಳ ಪೈಕಿ ಪಣಂಬೂರು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ ಚಿನ್ನಾಭರಣಗಳು ಸೇರಿರುತ್ತದೆ. ಆರೋಪಿಗಳ ಪೈಕಿ ಫರಾಜ್ ಎಂಬಾತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 279/2015 380 ಐಪಿಸಿ ಯಂತೆ ಹಾಗೂ ಪಣಂಬೂರು ಪೊಲೀಸ್ ಠಾಣೆ ಯಲ್ಲಿ ಅ. ಕ್ರ :21/2021 ಕ ಲಂ :454, 457, 380 ಐಪಿಸಿ ಯಂತೆ ಮನೆ ಕಳ್ಳತನ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here