ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಪಟ್ಟಿ ಪ್ರಕಟ – ಕೆಎಲ್ ರಾಹುಲ್ ನಾಯಕ

ಮಂಗಳೂರು: ಏಕದಿನ ವಿಶ್ವಕಪ್ ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ತಂಡದ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಆಯ್ಕೆ ಮಾಡಲಾದ 15 ಸದಸ್ಯರ ಈ ಬಳಗವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಮೊದಲ ಎರಡು ಪಂದ್ಯಗಳಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಮೂರನೇ ಪಂದ್ಯದ ವೇಳೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಸರಣಿಯ ಮೂಲಕ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾಗೆ ಮರಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್. ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಅಕ್ಷರ್ ಪಟೇಲ್ ಅವರು ಮೊದಲ 2 ಪಂದ್ಯಗಳಿಂದ ಹೊರಗುಳಿದಿದ್ದು, ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಮೂರನೇ ಏಕದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

LEAVE A REPLY

Please enter your comment!
Please enter your name here