ಮಂಗಳೂರು(ನವದೆಹಲಿ): ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು ಸೇರ್ಪಡೆಯಾಗಿವೆ.
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ. ಈ ದೇವಾಲಯಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದ್ದು, ಪ್ರಸ್ತುತ ಮೂರು ಸ್ಮಾರಕಗಳು ಯುನೆಸ್ಕೋ ತಾಣವಾಗಿ ಘೋಷಣೆಯಾಗಿವೆ. ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ.
?BREAKING!
Just inscribed on the @UNESCO #WorldHeritage List: Sacred Ensembles of the Hoysalas, #India ??. Congratulations! ??
➡️ https://t.co/69Xvi4BtYv #45WHC pic.twitter.com/Frc2IGlTkf
— UNESCO ?️ #Education #Sciences #Culture ?? (@UNESCO) September 18, 2023