ಮಂಗಳೂರು(ನವದೆಹಲಿ): ಕಾವೇರಿ ನದಿ ನೀರು ಹಂಚಿಕೆ ವಿಚಾರ ಹಾಗೂ ಬರಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ತಾಜ್ ಮಾನ್ಸಿಂಗ್ ಹೋಟೆಲ್ ನಲ್ಲಿ ನಾಳೆ ಮಹತ್ವದ ಸಭೆ ಆಯೋಜಿಸಲಾಗಿದೆ.
ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಲೋಕಸಭಾ ಸದಸ್ಯರು ಮತ್ತು ರಾಜ್ಯ ಸಭಾ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಕರ್ನಾಟಕದ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು ನಾಳೆ ನಡೆಯಲಿರುವ ಸಭೆ ಕುರಿತಂತೆ ಕರ್ನಾಟಕ ಭವನದಲ್ಲಿ ಪೂರ್ವಭಾವಿ ಚರ್ಚೆ ನಡೆಸಿದ್ದಾರೆ.