ಮಂಗಳೂರು(ಬೆಂಗಳೂರು): ಕರ್ನಾಟಕದಲ್ಲಿ ತಂಬಾಕು ಖರೀದಿ ವಯಸ್ಸಿನ ಮಿತಿ 21 ವರ್ಷಕ್ಕೆ ಹೆಚ್ಚಿಸಲಾಗುವುದು. ಹುಕ್ಕಾಬಾರ್ಗಳನ್ನು ಕೂಡ ನಿಷೇಧಿಸಲಾಗುವುದು ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದಲ್ಲಿ ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ ಮಾತ್ರ ಕಾನೂನಿನಲ್ಲಿ ಅವಕಾಶವಿದ್ದು, ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ 21 ವರ್ಷದವರೆಗೆ ಮಿತಿಯನ್ನು ಹೆಚ್ಚಳ ಮಾಡಲಾಗುವುದು. ಈ ಮೂಲಕ 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ. ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವೆನೆಯನ್ನು ಶಾಲೆಗಳ ಜೊತೆಗೆ, ದೇವಸ್ಥಾನಗಳು, ಆಸ್ಪತ್ರೆಗಳ ಸುತ್ತ ಮುತ್ತಲು ನಿಷೇಧಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ತರಲಾಗುವುದು. ಈ ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನು ನಿಷೇಧಿಸಲಾಗಿತ್ತು. ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನು ನಿಷೇಧಿಸುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು.