ಆದಿ ಗುರು ಶಂಕರಾಚಾರ್ಯರಿಗೆ ಗೌರವದ ಹೂರಣ -ಸೆ. 21 ರಂದು 108 ಅಡಿ ಎತ್ತರದ ಪ್ರತಿಮೆ ಅನಾವರಣ

ಮಂಗಳೂರು(ಭೋಪಾಲ್): ಇಲ್ಲಿನ ಪ್ರಮುಖ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಓಂಕಾರೇಶ್ವರ ದೇವಾಲಯದ ಬಳಿ ನಿರ್ಮಿಸಲಾಗಿರುವ ತತ್ವಜ್ಞಾನಿ, ಆಚಾರ್ಯತ್ರಯರಲ್ಲಿ ಮೊದಲಿಗರಾದ ಶ್ರೀ ಆದಿ ಶಂಕರಾಚಾರ್ಯರ ಬೃಹತ್ ಪ್ರತಿಮೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅನಾವರಣಗೊಳಿಸಲಿದ್ದಾರೆ.

ಖಂಡ್ವಾ ಜಿಲ್ಲೆಯ ಓಂಕಾರೇಶ್ವರದ ನರ್ಮದಾ ನದಿ ತೀರದ ಮಾಂಧಾತಾ ಬೆಟ್ಟದಲ್ಲಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಆದಿ ಶಂಕರರ ಮೂರ್ತಿಯನ್ನು ಸೆಪ್ಟೆಂಬರ್ 21ರಂದು ಲೋಕಾರ್ಪಣೆ ಗೊಳಿಸಲಾಗುತ್ತಿದೆ. ಎಂಟನೇ ಶತಮಾನ ಅಧ್ವೈತ ಸಿದ್ಧಾಂತದ ಪ್ರತಿಪಾದಕರಾದ ಶಂಕರಚಾರ್ಯರ ಪ್ರತಿಮೆಯನ್ನು ಇಲ್ಲಿನ ಓಂಕಾರೇಶ್ವರನಿಗೆ ಅರ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಂಕರಾಚಾರ್ಯರು ಸನಾತನ ಧರ್ಮದ ಉಳಿವಿಗಾಗಿ ಕಾಲ್ನಡಿಗೆಯಲ್ಲೇ ದೇಶಾದ್ಯಂತ ಸಂಚರಿಸಿ ತಮ್ಮ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು. ಶಂಕರಾಚಾರ್ಯರಿಗೆ ಗೌರವವನ್ನು ಸಲ್ಲಿಸುವ ಉದ್ದೇಶದಿಂದ ಮಧ್ಯಪ್ರದೇಶ ಸರ್ಕಾರವು 108 ಅಡಿ ಎತ್ತರದ ಮೂರ್ತಿಯನ್ನು ಸ್ಥಾಪಿಸಿದೆ. ಈ ಪ್ರತಿಮೆಯನ್ನು ಏಕತ್ವದ ಪ್ರತಿಮೆ ಎಂದು ಕರೆಯಲಾಗಿದ್ದು, ಮಾಂಧಾತಾ ಬೆಟ್ಟ ತುದಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಈ ಹಿಂದೆ ಓಂಕಾರೇಶ್ವರದಲ್ಲಿ ಮ್ಯೂಸಿಯಂ ಜೊತೆಗೆ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ನಿರ್ಮಿಸಲು 2,141.85 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿತ್ತು.

 

LEAVE A REPLY

Please enter your comment!
Please enter your name here