



ಮಂಗಳೂರು: ಕಳೆದ 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ಅಡೂರ್ ಅಲ್ಪಕಾಲದ ಅಸೌಖ್ಯದ ಬಳಿಕ ಸೆ.22ರಂದು ನಿಧನರಾಗಿದ್ದಾರೆ







1996ರಲ್ಲಿ ಪೊಲೀಸ್ ಇಲಾಖೆ ಸೇರಿದ ಅವರು 27 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. ಕೇರಳದ ಕಾಸರಗೋಡಿನ ಅಡೂರಿನವರಾದ ಚಂದ್ರ ಅವರು, ಮೊದಲಬಾರಿಗೆ ಪಣಂಬೂರು ಠಾಣೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಆರಂಭಿಸಿದ್ದು, ಬಳಿಕ ಉಳ್ಳಾಲ, ಪಾಂಡೇಶ್ವರ, ಕಂಕನಾಡಿ ಸೇರಿದಂತೆ ಹಲವೂ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು.



ಲಿವರ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೂರು ತಿಂಗಳಿಂದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. 10 ದಿನಗಳ ಹಿಂದೆ ಡಿಸ್ಚಾರ್ಜ್ ಆಗಿದ್ದು, ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಚಿಕಿತ್ಸೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ .












