ಕಾವೇರಿ ವಿವಾದ : ಸೆ.26ಕ್ಕೆ ಬೆಂಗಳೂರು ನಗರ ಬಂದ್‌ ಗೆ ಕರೆ

ಮಂಗಳೂರು (ಬೆಂಗಳೂರು): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್‌ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಸೆ.26 ರಂದು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಿಕೊಂಡ ಅವರು, ಇದು ನಮ್ಮ ಬಂದ್‌ ಅಲ್ಲ, ರಾಜ್ಯದ ರೈತರ ಪರವಾಗಿ ಬೆಂಗಳೂರಿನ ನಾಗರಿಕರ ಬಂದ್‌. ಬೆಂಗಳೂರಿನಲ್ಲಿ 1.30 ಲಕ್ಷ ಜನ ಇದ್ದು, ಇದರಲ್ಲಿ 65 ಲಕ್ಷ ಜನ ಬೇರೆ ಭಾಷಿಕರು ಇದ್ದಾರೆ. ಅವರಿಗೂ ಕುಡಿಯುವ ನೀರಿನ ಅವಶ್ಯಕತೆ ಇದೆ. 45 ದಿನಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಬೆಂಗಳೂರಿನ ಜನ ಮಲಗಿದ್ದಾರೆ, ಇದು ಸರಿಯಲ್ಲ ಎಂದು ಹೇಳಿದ್ದಾರೆ.  ಯಾವುದೇ ಭಾಷಿಕರಾದರೂ ಕುಡಿಯಲು ಮತ್ತು ದೈನಂದಿನ ಬಳಕೆಗೆ ನೀರು ಮುಖ್ಯ. ಆದ್ದರಿಂದ ಎಲ್ಲರೂ ಈ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here