ದ.ಕ.ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಆಯ್ಕೆ ಹಿನ್ನೆಲೆ – ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹದ ಹೊಣೆ – ಆದೇಶ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಮಂಗಳೂರು (ಬೆಂಗಳೂರು): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಉಸ್ತುವಾರಿ ಹೊಣೆ ವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ತಮ್ಮನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವೀಕ್ಷಕರನ್ನಾಗಿ ನೇಮಿಸಲಾಗಿದೆ. ತಾವು ಈ ಕ್ಷೇತ್ರಕ್ಕೆ ಭೇಟಿ ನೀಡಿ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ವಿಧಾನಸಭಾ ಕ್ಷೇತ್ರವಾರು ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ ಜಿಲ್ಲೆಯ ಹಿರಿಯ ಮುಖಂಡರ, ಶಾಸಕರ, ಮಾಜಿ ಸಂಸದರ, ಮಾಜಿ ಶಾಸಕರ, ಡಿಸಿಸಿ-ಬಿಸಿಸಿ ಅಧ್ಯಕ್ಷರ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಾಗೂ ಪ್ರಮುಖ ಸಂಘ-ಸಂಸ್ಥೆಗಳ, ಶಿಕ್ಷಣ ಸಂಸ್ಥೆಗಳ, ಕೈಗಾರಿಕೋದ್ಯಮಿಗಳ ಹೀಗೆ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಸಂಭಾವ್ಯ ಅಭ್ಯರ್ಥಿ ಯಾರಾಗಬಹುದು ಎಂಬುದರ ಬಗ್ಗೆ 15 ದಿನದೊಳಗೆ ಖುದ್ದು ತನಗೆ ಗೌಪ್ಯ ವರದಿ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here