ರೈತರಿಗೆ ಸಿಹಿ ಸುದ್ದಿ ನೀಡಿದ ಸರಕಾರ – ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ಸಂಪುಟ ಅಸ್ತು

ಮಂಗಳೂರು(ಬೆಂಗಳೂರು): ರಾಜ್ಯದ ವಿವಿಧ ಎಸ್ಕಾಂಗಳ ವ್ಯಾಪ್ತಿಯಲ್ಲಿ 2015 ರಿಂದ ಈಚೆಗೆ ರೈತರು ಅಕ್ರಮವಾಗಿ ಅಳವಡಿಸಿದ್ದಂತ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, 2015ರಿಂದ ಈಚೆಗೆ ಅಕ್ರಮವಾಗಿ ಅಳವಡಿಕೆ ಮಾಡಿರುವ ಸುಮಾರು 2 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಂಪರ್ಕವನ್ನು ಸಕ್ರಮಗೊಳಿಸೊದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ರಾಜ್ಯ ಸರ್ಕಾರದಿಂದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸೋದಕ್ಕೆ ತಗಲುವ 6,099 ಕೋಟಿ ವೆಚ್ಚಕ್ಕೆ ಘಟನೋತ್ತರ ಅನುದಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದರೇ ಸೆ.22ರ ಬಳಿಕ ಅಕ್ರಮವಾಗಿ ಪಡೆಯುವ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ಇದು ಅನ್ವಯಿಸೋದಿಲ್ಲ. ಈಗಾಗಲೇ ಅಕ್ರಮವಾಗಿ ಸಂಪರ್ಕ ಪಡೆದು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಇದು ಅನ್ವಯ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.

LEAVE A REPLY

Please enter your comment!
Please enter your name here