ಮಂಗಳೂರು(ಬೆಂಗಳೂರು): ಕನ್ನಡ ಸಿನೆಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಸೆ.25 (ಸೋಮವಾರ) ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಅವರಿಗೆ ಹೃದಯಾಘಾತ ಸಂಭವಿದ್ದು. ಸದ್ಯ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ, ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್ಗಳಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.