ಮಂಗಳೂರು(ಬೆಂಗಳೂರು): ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚರಿಸಿದ ರೀ ರೈಲ್ ವಾಹನ ಹಳಿತಪ್ಪಿದ ಹಿನ್ನಲೆ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ. ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಹಳಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದು, ಯಶವಂತಪುರದಿಂದ ಮಂತ್ರಿ ಸ್ಕ್ವೇರ್ ವರೆಗೆ ರೈಲುಗಳು ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಸದ್ಯ ಈಗ ಹಸಿರು ಮಾರ್ಗದಲ್ಲಿ ಅರ್ಧಗಂಟೆಗೊಂದು ರೈಲು ಸಂಚರಿಸುತ್ತಿದೆ. ರೀ ರೈಲ್ ಅನ್ನು ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.