ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅ.6 ಮತ್ತು 7ರಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ಆಳ್ವಾಸ್ ಪ್ರಗತಿ-2023 ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.
ವೈದ್ಯಕೀಯ, ಅರೆ ವೈದ್ಯಕೀಯ, ಎಂಜನಿಯರಿಂಗ್, ಕಲಾ, ವಾಣಿಜ್ಯ ಮತ್ತು ಆಡಳಿತ ನಿರ್ವಹಣೆ, ಮೂಲ ವಿಜ್ಞಾನ, ನರ್ಸಿಂಗ್, ಐಟಿಐ, ಡಿಪ್ಲೊಮಾ ಹಾಗೂ ಕೌಶಲ ಹೊಂದಿದ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಅರ್ಹತೆ ಹೊಂದಿರುವವರು ಸೇರಿದಂತೆ ಎಲ್ಲಾ ಪದವಿ ಹಾಗೂ ಸ್ನಾತಕ ಪದವೀಧರರಿಗೆ ಆಳ್ವಾಸ್ ಪ್ರಗತಿ-2023 ಅತ್ಯುತ್ತಮ ಉದ್ಯೋಗಗಳ ಬೃಹತ್ ಅವಕಾಶವನ್ನು ಕಲ್ಪಿಸಲಿದೆ. ಸುಮಾರು 192 ಅತ್ಯುತ್ತಮ ಕಂಪೆನಿಗಳು ಆಳ್ವಾಸ್ ಪ್ರಗತಿ-2023 ರಲ್ಲಿ ಭಾಗವಹಿಸಲು ನೊಂದಾಯಿಸಿಕೊಂಡಿದ್ದು 13,605 ಉದ್ಯೋಗವಕಾಶಗಳನ್ನು ನೀಡಿದೆ. ಆಳ್ವಾಸ್ ಪ್ರಗತಿ-2023ರಲ್ಲಿ ಭಾಗವಹಿಸಲು ಮತ್ತು ಸಿದ್ದತಾ ಪರಿಕರಗಳನ್ನು ಪಡೆದುಕೊಳ್ಳಲು ಆನ್ ಲೈನ್ ನೋಂದಣಿ ಕಡ್ಡಾಯವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ತರಬೇತಿ ಮತ್ತು ನಿಯೋಜನೆ ಮುಖ್ಯಸ್ಥರಾದ ಸುಶಾಂತ್ ಅನಿಲ್ ಲೋಬೊ, ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.