ಪಿಎಂ ಉಜ್ವಲ ಯೋಜನೆಯ ಎಲ್​ಪಿಜಿ ಸಿಲಿಂಡರ್ ಸಬ್ಸಿಡಿ ದರ 300 ರೂ.ಗೆ ಏರಿಕೆ

ಮಂಗಳೂರು(ನವದೆಹಲಿ): ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್​ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.

200 ರೂ ಯಷ್ಟು ನೀಡಲಾಗುತ್ತಿದ್ದ ಸಬ್ಸಿಡಿಯನ್ನು 300 ರುಪಾಯಿಗೆ ಏರಿಸಲಾಗಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹೆಚ್ಚಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here