ವೇಣೂರು ಬಾಹುಬಲಿ ಮಸ್ತಕಾಭಿಷೇಕಕ್ಕೆ ಸಿದ್ಧತೆ – ಫೆಬ್ರವರಿ 22 ರಿಂದ ಮಾರ್ಚ್‌ 1ರವರೆಗೆ ಅದ್ಧೂರಿ ಆಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರಿನ ಭಗವಾನ ಬಾಹುಬಲಿಯ, ಮಹಾ ಮಸ್ತಕಾಭಿಷೇಕಕ್ಕೆ ದಿನಾಂಕವನ್ನು ನಿಗದಿಪಡಿಸಲಾಗಿದೆ.  ಪ್ರತಿ 12 ವರ್ಷಗಳಿಗೊಮ್ಮೆ ಮಹಾಭಿಷೇಕ ನಡೆಯುತ್ತಿದ್ದು,‌ 2024ರ ಫೆಬ್ರವರಿ 22 ರಿಂದ ಮಾರ್ಚ್ 1 ರ ವರೆಗೆ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಮಹಾಮಸ್ತಕಾಭಿಷೇಕಕ್ಕೆ ಎಲ್ಲ ತರದ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ದಿನೇಶ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದ್ದು, ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.   ಮಸ್ತಕಾಭಿಷೇಕಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲಿದೆ ಎಂದು ಸಚಿವರು ತಿಳಿಸಿದ್ದಾರೆ. ವೇಣೂರು, ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಫಲ್ಗುಣಿ ನದಿಯ ದಡದಲ್ಲಿರುವ ಒಂದು ಸಣ್ಣ ಗ್ರಾಮವಾಗಿದ್ದು, ಒಂದು ಕಾಲದಲ್ಲಿ ಜೈನ ಧರ್ಮದ ಕೇಂದ್ರ ಸ್ಥಾನವಾಗಿದ್ದು ಅಜಿಲ ರಾಜವಂಶದ ರಾಜಧಾನಿಯಾಗಿತ್ತು. ಇಲ್ಲಿ ಏಕಶಿಲೆಯಲ್ಲಿರುವ ಬಾಹುಬಲಿ ಮೂರ್ತಿ ಇದ್ದು, 12 ವರ್ಷಕ್ಕೊಮ್ಮೆ ಮಹಾಮಸ್ತಕಾಭಿಷೇಕ ನಡೆಯುತ್ತದೆ.

LEAVE A REPLY

Please enter your comment!
Please enter your name here