ಮೈಸೂರು ದಸರಾದಲ್ಲಿ ಏರ್ ಶೋ – ಕೇಂದ್ರ ಸರಕಾರದ ಅನುಮತಿ-ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಮಂಗಳೂರು: ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿಗಳು ಇಂದು (ಅ.6ರಂದು) ಸ್ಧಳ ಪರಿಶೀಲನೆ ನಡೆಸಿದರು.

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಏರ್ ಶೋ ನಡೆಸುವ ದಿನಾಂಕ ಹಾಗೂ ಸಮಯದ ಕುರಿತು ಚರ್ಚೆ ನಡೆಸಿದರು.

LEAVE A REPLY

Please enter your comment!
Please enter your name here