ಮಗನಿಗೆ ಕನ್ಯೆ ಸಿಗದ ಕಾರಣ – ಹಿಂದೂ ಸಂಪ್ರದಾಯದಂತೆ ಪೂಜಾ ಕಾರ್ಯ ನೆರವೇರಿಸಿದ ಧಾರವಾಡದ ಮುಸ್ಲಿಂ ಕುಟುಂಬ

ಮಂಗಳೂರು(ಗೋಕರ್ಣ): ಧಾರವಾಡದ ಮುಸ್ಲೀಂ ಕುಟುಂಬವೊಂದು ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ.

ಕಾರ್ಪೆಂಟರ್ ಕೆಲಸ ಮಾಡುವ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು, ಗೋಕರ್ಣದ ಪಿತೃಶಾಲೆಯಲ್ಲಿ ನಡೆಸಿದ್ದಾರೆ. ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಇದ್ದ ಈ ಕುಟುಂಬ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರಾಗಿದ್ದಾರೆ. ತಮ್ಮನಿಗೆ ಮದುವೆಗೆ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಮೊರೆ ಹೋಗಿದ್ದಾರೆ. ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳಿಗೆ ಸಿಗಲಿ ಎಂಬ ಉದ್ಧೇಶದಿಂದ ಈ ಕಾರ್ಯ ಮಾಡಿದ್ದಾರೆ ಎನ್ನಲಾಗಿದೆ. ಜ್ಯೋತಿಷಿಯ ಮಾರ್ಗದರ್ಶನದಂತೆ ಗೋಕಣಕ್ಕೆ ಬಂದು ಕ್ಷೇತ್ರ ಪುರೋಹಿತ ವೇ. ಮೂರ್ತಿ ನಾಗರಾಜ ಭಟ್ ಗುರ್ಲಿಂಗ್ ಹಾಗೂ ವೇ.ಮೂರ್ತಿ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯಗಳನ್ನು ನಿರ್ವಹಿಸಲಾಗಿದೆ.

LEAVE A REPLY

Please enter your comment!
Please enter your name here