ಮುಂದುವರಿದ ಆಂತರಿಕ ಶೀತಲ ಸಮರ – ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಸಿಗದ ಗ್ನೀನ್ ಸಿಗ್ನಲ್

ಮಂಗಳೂರು(ಬೆಂಗಳೂರು): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿದೆ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರು ಎಲ್ಲಾ 30 ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮತ್ತು ತಾಲೂಕು ನಾಯಕರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು. ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿ ಆಂತರಿಕ ಅಘೋಷಿತ ಶೀತಲ ಸಮರ ಇದೆ. ಅದೇ ಕಾರಣದಿಂದ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದು ಮೂಲಗಳು ಹೇಳುತ್ತವೆ. ಸತತ ಮೂರನೇ ವರ್ಷ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸಕ್ಕೆ ತೆರಳಲು ಪ್ರಯತ್ನಿಸುತ್ತಿದ್ದಾರೆ ಆದರೆ ಪಕ್ಷವು ಅವರನ್ನು ಕಾಯುವಂತೆ ಕೇಳಿದೆ. ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಪಕ್ಷವು ಹಲವು ಕೆಲಸಗಳಲ್ಲಿ ನಿರತವಾಗಿದೆ, ಯಡಿಯೂರಪ್ಪ ಅವರು ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಈ ಮಧ್ಯೆ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದ್ದು, ಅದಾದ ನಂತರ ಯಡಿಯೂರಪ್ಪ ತಮ್ಮ ಪ್ರವಾಸವನ್ನು ಪ್ರಾರಂಭಿಸಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ ಕೆಲವು ಭ್ರಷ್ಟ ವ್ಯಕ್ತಿಗಳೊಂದಿಗೆ ವಿಜಯೇಂದ್ರ ಅವರ ಸಂಪರ್ಕದ ವಿಷಯವನ್ನು ಎತ್ತುತ್ತಿರುವ ಯಡಿಯೂರಪ್ಪ ಅವರನ್ನು ವಿರೋಧಿಸುವ ಗುಂಪು ಅದಕ್ಕೆ ಅಡ್ಡಗಾಲು ಹಾಕುತ್ತಿದೆ ಎನ್ನಲಾಗುತ್ತಿದೆ.

 

LEAVE A REPLY

Please enter your comment!
Please enter your name here